ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವರದಿ ನೀಡಲು ಶಿಕ್ಷಣ ಸಚಿವರಿಗೆ ತಿಳಿಸಲಾಗಿದೆ. ಪ್ರಕರಣದ ಎಲ್ಲ ಆಯಾಮಗಳ ಪರಿಶೀಲನೆಯ ನಂತರ ವರದಿ ನೀಡುವುದಾಗಿ ಸಚಿವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಸಚಿವರು ಭೇಟಿ ಮಾಡಿರುವುದಾಗಿ ತಿಳಿಸಿ, ಸತ್ಯಾಂಶವನ್ನು ದಾಖಲೆ ಸಮೇತ ನೀಡುವುದಾಗಿ ಸಚಿವರು ತಿಳಿಸಿದ್ದು, ವರದಿ ಬಂದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
Also read: ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ದಿ: ಸಂಸದ ರಾಘವೇಂದ್ರ
ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಂತೆ ಮಳಲಿ ಮಸೀದಿಯ ಸರ್ವೇ ಕಾರ್ಯ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಕರಣವು ನ್ಯಾಯಾಲಯದಲ್ಲಿದ್ದು, ಜೂನ್ 3ಕ್ಕೆ ವಿಚಾರಣೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post