ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮತದಾರರ ಪಟ್ಟಿಯೊಂದಿಗೆ Voter List ಆಧಾರ್ Aadhar ಲಿಂಕ್ ಮಾಡುವ ನಿಯಮಗಳನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಜಾರಿಗೊಳಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ಸುದ್ಧಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಸ್ವಯಂ ಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್ ಮಾಡದ ಮತದಾರರು “ಸಾಕಷ್ಟು ಕಾರಣಗಳನ್ನು ನೀಡಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.
ಸುಶೀಲ್ ಚಂದ್ರ ಅವರು ಇಂದು ನಿವೃತ್ತಿಯಾಗುತ್ತಿದ್ದು, ತಮ್ಮ ಕಚೇರಿಯಿಂದ ನಿರ್ಗಮಿಸುವ ಮುನ್ನ, ಮತದಾರರು ಮತ್ತು ಚುನಾವಣಾ ಕರ್ತವ್ಯದಲ್ಲಿ ತೊಡಗಿರುವವರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ವರ್ಷದ ಮಾರ್ಚ್‌ನಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆ ಲಸಿಕೆ ಅಭಿಯಾನ ತೀವ್ರಗೊಳಿಸುವಲ್ಲಿ ಚುನಾವಣಾ ಸಮಿತಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.
18 ವರ್ಷ ತುಂಬಿದವರನ್ನು ಮತದಾರರಾಗಿ ನೋಂದಾಯಿಸಲು ಒಂದು ವರ್ಷದಲ್ಲಿ ನಾಲ್ಕು ಬಾರಿ ಅವಕಾಶ ನೀಡುವುದು ಮತ್ತು ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ತಮ್ಮ ಅಧಿಕಾರಾವಧಿಯಲ್ಲಿ ನಡೆದ ಎರಡು ಪ್ರಮುಖ ಚುನಾವಣಾ ಸುಧಾರಣೆಗಳೆಂದು ಅವರು ಹೇಳಿದ್ದಾರೆ.
Also read: ಸಿಗಂಧೂರು ಬಳಿ ಟೆಂಪೋ ಪಲ್ಟಿ: 8 ಜನರಿಗೆ ಗಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post