ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಉದ್ದೀಪನ ಮದ್ದು ಸೇವನೆ ವಿಚಾರದಲ್ಲಿ ಡೋಪಿಂಗ್ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ದೇಶದ ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರನ್ನು 2 ವರ್ಷಗಳ ಕಾಲ ನಿಷೇಧಗೊಳಿಸಲಾಗಿದೆ.
ಇದಕ್ಕೂ ಹಿಂದೆ ಅವರನ್ನು 3 ತಿಂಗಳವರೆಗೂ ನಿಷೇಧಿಸಲಾಗಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.
ಪೂವಮ್ಮ(32) ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ ಇಂಡಿಯನ್ ಗ್ರ್ಯಾನ್ಪಿ ಕೂಟದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಪರೀಕ್ಷೆಗೆ ನೀಡಿದ್ದ ಮಾದರಿಯಲ್ಲಿ ನಿಷೇಧಿತ ಮೆಥೈಲ್ಹೆಕ್ಸಾನೀಮೈನ್ ಮದ್ದಿನ ಅಂಶ ಇರುವುದು ಪತ್ತೆಯಾಗಿತ್ತು.
Also read: ಇಡಿ ಡ್ರಿಲ್ ನಡುವೆಯೇ ಡಿ.ಕೆ. ಶಿವಕುಮಾರ್’ಗೆ ಜ್ವರದ ಬಾಧೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post