ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಐದು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ಪಟ್ಟಣದ ಧಂತೋಲಿ ಪ್ರದೇಶದಲ್ಲಿ ನಡೆದಿದೆ.
ಐದು ವರ್ಷದ ಬಾಲಕ ತನ್ನ ಸಹೋದರಿಯೊಂದಿಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಆತನ ಸಹೋದರಿ ನಾಯಿಗಳನ್ನು ಓಡಿಸಲು ಪ್ರಯತ್ನಿಸಿದಾಗ, ಬಾಲಕನನ್ನು ಕಟ್ಟಡ ನಿರ್ಮಾಣ ಸ್ಥಳಕ್ಕೆ ಎಳೆದೊಯ್ದು ಕಚ್ಚಿ ಗಾಯಗೊಳಿಸಿವೆ ಎನ್ನಲಾಗಿದೆ.
Also read: ಸಮಯದ ಪರಿವೇ ಇಲ್ಲದೆ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅತ್ಯವಶ್ಯ
ಪೋಷಕರು ಮತ್ತು ಸ್ಥಳಿಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ತೀವ್ರ ರಕ್ತಸ್ರಾವವಾದ ಹಿನ್ನೆಲೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post