ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ವಿಜಯ್ ಮಲ್ಯಗೆ Vijaya Mallya ನಾಲ್ಕು ತಿಂಗಳು ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಿ ಸುಪ್ರೀಂ ಕೋರ್ಟ್ Supreme Court ಆದೇಶಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ನ್ಯಾಯಾಲಯ, 2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಪರಾರಿಯಾಗಿರುವ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ.
ಅಲ್ಲದೇ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್’ಗಳನ್ನು ಹಿಂದಿರುಗಿಸುವಂತೆ ನ್ಯಾಯಾಲಯ ಆದೇಶಿಸಿದೆ.
Also read: ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿ: ಶಂಕರ್ ಶೇಟ್ ಅಭಿಮತ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post