ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಎಸಿಬಿ ರದ್ದು ಮಾಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ Supreme Court ಮೆಟ್ಟಿಲೇರಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಯನ್ನು ರಾಜ್ಯ ಸರ್ಕಾರ ಸಲ್ಲಿಸಿದ್ದು, ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯನ್ಯಾಯಮೂರ್ತಿ ಸಿ.ಜೆ. ರಮಣ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.
ಆಗಸ್ಟ್ 11ರಂದು ಎಸಿಬಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದ ಹೈಕೋರ್ಟ್, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















