ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ಉಪವಿಭಾಗೀಯ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಮಕ್ಕಳಲ್ಲಿ ಸಂಜೆ ನೀಡಿದ ಚುಚ್ಚುಮದ್ದಿನ ಅಡ್ಡಪರಿಣಾಮದಿಂದಾಗಿ ಕೆಲ ಮಕ್ಕಳಿಗೆ ಧಿಡೀರೆಂದು ಅತಿಯಾದ ಚಳಿ ಜ್ವರ ಕಾಣಿಸಿಕೊಂಡು ಪೋಷಕರು ಆತಂಕಗೊಂಡಿರುವ ಘಟನೆ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಶಾಸಕ ಹೆಚ್. ಹಾಲಪ್ಪ MLA Halappa ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿ, ವೈದ್ಯರೊಂದಿಗೆ ಸಮಾಲೋಚನೆ ನೆಡೆಸಿದರು.
4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಜಿಲ್ಲಾ ಮಟ್ಟದ ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ, ಯಾರು ಆತಂಕಕ್ಕೊಳಗಾವುದು ಬೇಡ ಎಂದು ಪೋಷಕರಿಗೆ ಧೈರ್ಯ ತುಂಬಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post