ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.
Also read: ನಟ ಡಾ. ಪುನೀತ್ ರಾಜಕುಮಾರ್’ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ ಪೆಟ್ಟಾಗಿದ್ದು, ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಭಾವತಿಯವರು ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post