ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕಳೆದ ದಶಕದಿಂದೀಚೆಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳಾಗಿದ್ದು, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ತೀವ್ರ ಪ್ರತಿಸ್ಫರ್ಧೆಯ ನಡುವೆ ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳು ಸ್ವಾಯತ್ತತೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಿನ ವಿಚಾರವಾಗಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘದ ವತಿಯಿಂದ ಜ್ಞಾನಸಹ್ಯಾದ್ರಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥೆಯೇ ಸಂಪೂರ್ಣ ಬುಡಮೇಲಾಗುತ್ತಿದೆ. ಒಂದೆಡೆ ಸರ್ಕಾರದ ಅನುದಾನ ಕಡಿತಗೊಳ್ಳುತ್ತಿದ್ದರೆ, ಇನ್ನೊಂದೆಡೆ ವಿವಿಗಳು ಬಹುತೇಕ ಸ್ವಾಯತ್ತತೆ ಕಳೆದುಕೊಳ್ಳುತ್ತಿದೆ ಎಂದರು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ದೂರಶಿಕ್ಷಣ ಕೋರ್ಸ್‌ಗಳನ್ನು ನಡೆಸುವುದರ ಮೂಲಕ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದ ಕುವೆಂಪು ವಿಶ್ವವಿದ್ಯಾಲಯ ಈಗ ಸರ್ಕಾರದ ಅನುದಾನಕ್ಕೆ ಕಾದು ಕೂರುವಂತಹ ಗಂಭೀರ ಸ್ಥಿತಿಯಲ್ಲಿದೆ. ಸರ್ಕಾರ ಎಲ್ಲ ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೋರ್ಸ್‌ಗಳಿಗೆ ಕಡಿವಾಣ ಹಾಕಿದ್ದು ದೊಡ್ಡ ಹಿನ್ನಡೆ ಎಂದರು.

Also read: ಪಂ. ದೀನ್ ದಯಾಳ್ ಉಪಾಧ್ಯಾಯ ಅವರ ತ್ಯಾಗ ಅಪಾರ: ಸಂಸದ ರಾಘವೇಂದ್ರ











Discussion about this post