ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ B Y Vijayendra ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಘೋಷಣೆ ಮಾಡಿದ್ದಾರೆ.
ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಅವರು, ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಹೀಗಾಗಿ, ಪುತ್ರ ವಿಜಯೇಂದ್ರನಿಗೆ ಕ್ಷೇತ್ರದಲ್ಲಿ ಅವಕಾಶ ನೀಡುತ್ತಿz್ದೆÃನೆ. ಕ್ಷೇತ್ರದ ಜನರ ಆಶಯವೂ ಸಹ ಇದೇ ಆಗಿದ್ದು, ಪುತ್ರನನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಅಪೇಕ್ಷೆಯಂತೆ ವಿಜಯೇಂದ್ರ ತಾಲೂಕಿನಾದ್ಯಂತ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















