ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿ 60,000ರೂ. ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಚಿಕ್ಕಜಂಬೂರು ಗ್ರಾಮದವರಾದ ಮುಷ್ತಾಕ್ ಅಹಮ್ಮದ್ (38), ಫೀರ್ ಖಾನ್ (43) ಬಂಧಿತ ಆರೋಪಿಗಳಾಗಿದ್ದ, ಚಿಕ್ಕಜಂಬೂರು ಗ್ರಾಮದ ಕಡೆಯಿಂದ ಶಿರಾಳಕೊಪ್ಪ ಕಡೆಗೆ ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ 17ಕೆಜಿ 660ಗ್ರಾಂ ತೂಕದ ಶ್ರೀಗಂಧ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Also read: ಟ್ವೀಟರ್‌ನಲ್ಲಿ ಟ್ರೆಂಡ್ ಆದ ಅಮೃತ್ ನೋನಿ ಕಿರುಚಿತ್ರ: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post