ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಕ್ತದಾನ ಮಾಡುವುದರಿಂದ ಪ್ರಾಣ ಉಳಿಸುವ ಶ್ರೇಷ್ಠ ಕಾರ್ಯದ ಜತೆಯಲ್ಲಿ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.
ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಎಸ್.ಎನ್.ಎಂಟರ್ ಪ್ರೈಸಸ್, ರೋಟರಿ ಶಿವಮೊಗ್ಗ ಪೂರ್ವ ಇವರ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ರಕ್ತದಾನದ ಕೊರತೆ ತುಂಬಾ ಇದ್ದು, ರಕ್ತದಾನ ಮಾಡಲು ಸಾಕಷ್ಟು ಜನರಲ್ಲಿ ಭಯ ಹಾಗೂ ಮೂಡನಂಬಿಕೆ ಇದೆ. ಇದರಿಂದ ರಕ್ತದಾನ ಮಾಡಲು ಹಿಂಜರಿಯುತ್ತಾರೆ. ಯಾವುದೇ ತಪ್ಪು ಕಲ್ಪನೆ ಹಾಗೂ ಭಯ ಹೊಂದದೇ ರಕ್ತದಾನ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಆರೋಗ್ಯವಂತ ಯುವ ಸಮುದಾಯ ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
Also read: ಶಾಸಕ ಈಶ್ವರಪ್ಪ ಹೇಳಿಕೆ ವಿರೋಧಿಸಿ ಜೂ.3ರಂದು ಎಎಪಿ ಪ್ರತಿಭಟನೆ
ಇದೇ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನದಿಂದ ದೀರ್ಘಾಯುಷ್ಯ ಉಳ್ಳವರಾಗಿ ಆರೋಗ್ಯ ವೃದ್ಧಿ ಆಗುತ್ತದೆ. ದೇಹದಲ್ಲಿರುವ ಅನೇಕ ಖಾಯಿಲೆಗಳ ಬಗ್ಗೆ ಮಾಹಿತಿ ತಿಳಿಯುತ್ತದೆ. ಜೀವ ಉಳಿಸುವ ರಕ್ತದಾನಕ್ಕಿಂತ ಶ್ರೇಷ್ಠದಾನ ಮತ್ತೊಂದಿಲ್ಲ. ಯುವ ಸಮುದಾಯ ರಕ್ತದಾನ ಮಾಡುವ ಮೂಲಕ ಉತ್ತಮ ಕೆಲಸ ಮಾಡೋಣ ಎಂದರು.
ಇದೇ ಸಂದರ್ಭದಲ್ಲಿ ವಲಯ ನಿರ್ದೇಶಕ ಅನೂಷ್‌ಗೌಡ ರಕ್ತದಾನದ ಬಗ್ಗೆ ಮಾಹಿತಿ ನೀಡಿ ದಾನಿಗಳಿಗೆ ರಕ್ತದಾನ ಪ್ರಮಾಣಪತ್ರ ನೀಡಿ ಶುಭಹಾರೈಸಿದರು. ರಕ್ತದಾನ ಶಿಬಿರದಲ್ಲಿ ವಲಯ ಸಂಯೋಜಕ ಕಿಶೋರ್, ಚಂದ್ರಹಾಸ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್, ಡಾ. ಲಲಿತಾ ಭಾರತ್ ಹಾಗೂ 108 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ ಕದಂ, ಕಾರ್ತಿಕ್, ಸುಮಂತ್, ನೂತನ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post