ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಬ್ಬರು ಮಕ್ಕಳೊಂದಿಗೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೋರಡಿ ಗ್ರಾಮದಲ್ಲಿ ನಡೆದಿದೆ.
ಕುಂಸಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ. ಮಹಿಳೆಯ ಗಂಡ ಮತ್ತು ಕುಂಟುಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತ ಯುವತಿಯ ತಂದೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಹಿನ್ನೆಲೆ:
ದಾವಣಗೆರೆ ಜಿಲ್ಲೆಯ ಸಾಸ್ವೆಯಳ್ಳಿ ನಿವಾಸಿಯೋರ್ವರು ತಮ್ಮ ಮಗಳನ್ನು ಶಿವಮೊಗ್ಗೆ ಜಿಲ್ಲೆಯ ಕುಂಸಿ ವಾಸಿ ಶಿವಮೂರ್ತಿ ಎನ್ನುವವರಿಗೆ 2018ರಲ್ಲಿ ಮದುವೆ ಮಾಡಿಕೊಟ್ಟದ್ದರು. ಮೃತ ಮಹಿಳೆಗೆ ಎರಡುವರೆ ವರ್ಷದ ಹೆಣ್ಣು ಮಗು ಮತ್ತು ಒಂದು ವರ್ಷದ ಗಂಡು ಮಗುವಿತ್ತು. ಕಳೆದ ಕೆಲವು ದಿನಗಳಿಂದ ಗಂಡ ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
Also read: ಮನಸ್ಸಿಗೆ ಮುದ ನೀಡುವ ಮಕ್ಕಳ ಕಲರವ: ಇಂದಿನಿಂದ ಶಾಲೆಗಳು ಪುನರಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post