ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಭದ್ರಾವತಿ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎರಡು ಲಾರಿಗಳ ನಡುವ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಾಚೇನಹಳ್ಳಿ ಐಟಿ ಪಾರ್ಕ್ ಬಳಿ ಘಟನೆ ನಡೆದಿದ್ದು, ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ.
ಕ್ಯಾಂಟರನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ, ಅದೇ ದಾರಿಯಲ್ಲಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
Also read: ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಅಪಘಾತ: ಎರಡು ಲಾರಿಗಳ ನಡುವೆ ಢಿಕ್ಕಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post