ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಎನ್ ಎಸ್ ಯು ಐ NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ( ಎನ್ ಎಸ್ ಯು ಐ ) ಶಿವಮೊಗ್ಗ ಜಿಲ್ಲೆ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ದೇಶದ ಐತಿಹಾಸಿಕ ಮತ್ತು ಸತ್ಯ ಸಂಗತಿಗಳನ್ನು ಯುವ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸಮಾಜದ ಎಲ್ಲ ವರ್ಗದ ಜನರಿಗೂ, ಯುವ ವಿದ್ಯಾರ್ಥಿಗಳಿಗೂ ನೈಜ ಇತಿಹಾಸದ ಬಗ್ಗೆ ತಿಳವಳಿಕೆ ಮೂಡಿಸಬೇಕು. ಸಮಾಜವನ್ನು ಸದೃಢವಾಗಿ ರೂಪಿಸುವ ನಿಟ್ಟಿನಲ್ಲಿ ಯುವಜನತೆ ಮಹತ್ತರ ಪಾತ್ರ ವಹಿಸಬೇಕು ಎಂದರು.

Also read: ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ರೇಖಾ ರಂಗನಾಥ್ ಆಯ್ಕೆ
ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಗಳಿಸುವ ಜತೆಯಲ್ಲಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತಲುಪಬೇಕು. ಯುವ ಜನತೆ ಜವಾಬ್ದಾರಿಯಿಂದ ವರ್ತಿಸಿ ಜೀವನದಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.

ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಜಿತ್, ಕೆ.ಚೇತನ್, ಸಿ.ಜಿ.ಮಧುಸೂದನ್, ಮುಖಂಡರಾದ ಎಸ್.ಪಿ.ದಿನೇಶ್, ಕಲಗೋಡು ರತ್ನಾಕರ್, ರಮೇಶ್ ಹೆಗ್ಡೆ, ವಿಜಯ್ ಕುಮಾರ್(ದನಿ), ಯಮುನಾ ರಂಗೇಗೌಡ, ಆದರ್ಶ್, ಪ್ರಶಾಂತ್, ಹನುಮಂತು, ಮಹಮ್ಮದ್ ಆರೀಫ್, ರಾಘವೇಂದ್ರ, ಮೊಹಮ್ಮದ್ ನಿಹಾಲ್, ಮಲ್ಲಿಕ್, ಪೂರ್ಣೇಶ್ ಮತ್ತಿತರರು ಉಪಸ್ಥಿತರಿದ್ದರು.










Discussion about this post