ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ Minister Eshwarappa ಮತ್ತು ಸಂಸದ ಬಿ.ವೈ. ರಾಘವೇಂದ್ರ MP Raghavendra ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಸಕ್ತ ವರ್ಷದ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಆಚರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು PM Narendra Modi ಏಪ್ರಿಲ್ 24 ರಂದು ಶಿವಮೊಗ್ಗದ ಹೊಳಲೂರಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ನೆಡೆದ ಸಭೆಯಲ್ಲಿ ಸಂಸದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಸಲಹೆ ಸೂಚನೆಯನ್ನು ನೀಡಿದರು.
ನಂತರ ಸಂಸದರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯlತ್ ರಾಜ್ ಸಚಿವ ಈಶ್ವರಪ್ಪ ಹಾಗೂ ಅಧಿಕಾರಿಗಳು ಹೊಳಲೂರಿನಲ್ಲಿ ಕಾರ್ಯಕ್ರಮಕ್ಕಾಗಿ ನಿಗದಿ ಪಡಿಸಿರುವ ಸ್ಥಳವನ್ನು ವೀಕ್ಷಿಸಿದರು.
Also read: ಶಾಸಕ ಸಂಗಮೇಶ್ವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಮಿತಿ ಸಭೆ: ಹಕ್ಕುಪತ್ರ ವಿತರಣೆ
ಈ ಸಂದರ್ಭದಲ್ಲಿ ಸರ್ಕಾರದ ಆಪ್ತ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅವೇಕ್, ಆರ್‌ಡಿಪಿಆರ್ ಆಯುಕ್ತ ಶಿಲ್ಪಾ ನಾಗ್, ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ , ಪೊಲೀಸ್ ಅಧೀಕ್ಷಕ ಬಿ. ಎಂ. ಲಕ್ಷ್ಮಿ ಪ್ರಸಾದ್. ಸಿ.ಇ.ಓ.ವೈಶಾಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post