ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಜಲಾಶಯಕ್ಕೆ ನಾಳೆ ಬೆಳಿಗ್ಗೆ 9ಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಸಿದ್ಧತೆ ಕುರಿತು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಜಲಾಶಯಕ್ಕೆ ಪವಿತ್ರಾ ರಾಮಯ್ಯ Pavithra Ramaiah ಭೇಟಿ ನೀಡಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ಪಡೆದು, ಸ್ಥಳ ಪರಿಶೀಲನೆ ನಡೆಸಿದರು.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು ಹಾಗೂ ರೈತ ಮುಖಂಡರು ಭಾಗವಹಿಸುವ ಸಾಧ್ಯತೆ ಇದ್ದು, ಯಾವುದೇ ರೀತಿ ಸಮಸ್ಯೆಯಾಗದಂತೆ ಕೂರಲು ಆಸನದ ವ್ಯವಸ್ಥೆ ಹಾಗೂ ಉಪಹಾರ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.

Also read: ರೈತರಲ್ಲಿ ಭರವಸೆಯ ಬೆಳಕು ಮೂಡಿಸಿದ ವಿದ್ಯಾನಿಧಿ ಯೋಜನೆ: ಸಿಎಂ ಬೊಮ್ಮಾಯಿ









Discussion about this post