ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಮ್ಮೆಗಳ ಹಿಂಡಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 7 ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಪಶ್ಚಿಮ ಪೊಲೀಸ್ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಸಾಗರ ರಸ್ತೆಯ ಚಾನೆಲ್ ದಂಡೆಯ ಸೇತುವೆ ಮೇಲೆ ಎಮ್ಮೆಗಳು ಗುಂಪಾಗಿ ರಸ್ತೆ ದಾಟುವ ಸಂದರ್ಭದಲ್ಲಿ ಶಿವಮೊಗ್ಗ ಕಡೆಯಿಂದ ಸಾಗರ ಕಡೆಗೆ ಹೊರಟಿದ್ದ ಕಾರು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದು, ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತ ಸ್ಥಳಕ್ಕೆ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪರಿಶಿಲನೆ ನಡೆಸಿದರು.
Also read: ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆ ಪುನರಾರಂಭ – ಸಿಎಂ
ಗಾಡಿಕೊಪ್ಪದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಎಮ್ಮೆಗಳಾಗದ್ದು, ಕಾgನ್ನು ಠಾಣೆಗೆ ತಂದಿರಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post