ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿಬಿಎಸ್’ಸಿ ಪ್ರಕಟಿಸಿರುವ 10ನೆಯ ತರಗತಿ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನ್ಯಾಶನಲ್ ಪಬ್ಲಿಕ್ ಶಾಲೆ ಶೇ.100ರಷ್ಟು ಸಾಧನೆ ಮಾಡುವ ಮೂಲಕ ಕೀರ್ತಿ ಗಳಿಸಿದೆ.
ಶಾಲೆಯ ವಿದ್ಯಾರ್ಥಿಗಳಾದ ಆರ್ಯ ವಿಶು ಕುಮಾರ್ ಶೇ.97.20, ವಿ. ಶ್ರಾವಣಿ ಶೇ.96, ಎಂ. ಲಿಖಿತಾ ಶೇ.95.80, ಎ.ಸಿ. ಅಪೇಕ್ಷಾ ಶೇ.95.40, ಸಿ.ಪಿ. ಶರಧಿ ಶೇ.95.40, ಜಗದೀಶ್ ಶೇ.95.40, ದಿವ್ಯ ಎನ್. ಬೊಹ್ರಾ ಶೇ.95ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಶಾಲೆಯಿಂದ ಒಟ್ಟು 116 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 56 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 09 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
Also read: Time for India to adopt Global Best standards in Cotton Productivity: Piyush Goyal
ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ಈ ಎಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಲ್ಲಾ ಸದಸ್ಯರು, ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post