ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯವನ್ನು ತುಂಬುತ್ತಾ ಸಾರ್ವಜನಿಕರ ಆರೋಗ್ಯ ಕಾಪಾಡಲು ಹಗಲಿರುಳೆನ್ನದೇ ತಮ್ಮ ಜೀವನದ ಹಂಗನ್ನೇ ತೊರೆದು ಕರ್ತವ್ಯವನ್ನು ನಿರ್ವಹಿಸಿದ ಶಿವಮೊಗ್ಗ ಜಿಲ್ಲಾ ಆಶಾ ಕಾರ್ಯಕರ್ತೆಯರಿಗೆ ಮೇ 25ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಧನಂಜಯ ಸರ್ಜಿ Dr. Dhananjaya Sarji ಹೇಳಿದರು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಚೈತನ್ಯ ರೂರಲ್ ಡೆವಲಪಮೆಂಟ್ ಸೊಸೈಟಿ, ಶಿವಮೊಗ್ಗ ಹಾಗೂ ಸರ್ಜಿ ಫೌಂಡೇಷನ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸರ್ಜಿ ಆರೋಗ್ಯ ಕಾರ್ಡ್ ಮತ್ತು ಚೈತನ್ಯ ಫೌಂಡೇಷನ್ ವತಿಯಿಂದ ನಾಳೆ ಮಧ್ಯಾಹ್ನ 12 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಕೋವಿಡ್ ಕಿಟ್ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಚೈತನ್ಯ ಫೌಂಡೇಶನ್ ಸಿ.ಇಓ ಬಿ.ಟಿ. ಭದ್ರೇಶ್ ಮಾತನಾಡಿ, ಚೈತನ್ಯ ಸಂಸ್ಥೆಯ ಅಧ್ಯಕ್ಷ ಡಾ. ರೇಜಿ ಜೋಸೆಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ್ರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Also read: ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ವಿತರಣೆ: ಅಧಿಕಾರಿಗಳಿಗೆ ಶಾಸಕ ಖಾಶೆಂಪುರ್ ಸೂಚನೆ
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಆರುಣ್, ಶಾಸಕ ಅಶೋಕ್ ನಾಯ್ಕ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್. ವೈಶಾಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಆರ್.ಎಸ್.ಎಸ್.ನ ದಕ್ಷಿಣ ಪ್ರಾಂತದ ಕಾರ್ಯವಾಹಕ ಪಟ್ಟಾಭಿರಾಮ್, ಧ್ವನಿ ಫೌಂಡೇಷನ್ ವ್ಯವಸ್ಥಾಪಕ ನಿರ್ದೇಶಕ ಗೋಪಿನಾಥ್ ಉಪಸ್ಥಿತರಿರುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸರ್ಜಿ ಫೌಂಡೇಷನ್ ನ ನಿರ್ದೇಶಕರಾದ ನಮಿತಾ ಸರ್ಜಿ ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post