ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕಿನ ಮಂಡಘಟ್ಟ ಗ್ರಾಮ ಪಂಚಾಯಿತಿಗೆ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಭೇಟಿ ನೀಡಿ ಪಂಚಾಯಿತಿಯಲ್ಲಿ ಈ ಸ್ವಚ್ಛ್, ಘನ ತ್ಯಾಜ್ಯ ವಿಲೇವಾರಿ ಘಟಕ, ಮನೆಗಳ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ ಹಾಗೂ ಹಲವು ವಿಷಯಗಳ ಕುರಿತು ಚರ್ಚಿಸಿದರು.
ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ನೀಡಿರುವ ಮಹತ್ವ ಹಾಗೂ ಅನುದಾನದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post