ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈಗಿರುವ ನಿಯಮಗಳು ಬಿಗಿಯಾಗಿದ್ದು, ಹಲವು ತಾಂತ್ರಿಕ ಕಾರಣಗಳಿಂದ ಪರಿಹಾರಧನ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸಹಾಯಧನ ಹೆಚ್ಚಿಸುವುದರ ಜೊತೆಗೆ ಸರಿಯಾದ ಸಮಯಕ್ಕೆ ತಲುಪುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದು, ಅವರು ಸ್ಪಂದಿಸಿದ್ದಾರೆ. ವಿಧಾನ ಪರಿಷತ್‌ನ ಸದಸ್ಯರೆಲ್ಲರೂ ಪಕ್ಷಾತೀತವಾಗಿ ಈ ಮನವಿ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಆವಾಸ್ ವಸತಿ ಯೋಜನೆ ಸೇರಿದಂತೆ ಹಲವು ಯೋಜನೆ ಅಡಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುವ ಮೂಲಕ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸೇರಿ ಸರ್ಕಾರದ ಗಮನಸೆಳೆದಿದ್ದೇವೆ. ಫಲಾನುಭವಿಗಳಲ್ಲಿ ಅನೇಕರಿಗೆ ಮೊದಲ ಕಂತು ಬಿಡುಗಡೆಯಾಗಿದೆ. ಎರಡನೇ ಕಂತು ಬಿಡುಗಡೆಯಾಗಿಲ್ಲ. ಇದಕ್ಕೆ ಹಲವು ತಾಂತ್ರಿಕ ಕಾರಣಗಳಿವೆ. ದಾಖಲೆಗಳನ್ನು ಅಪ್ ಲೋಡ್ ಮಾಡಲು ಸಮಸ್ಯೆಯಾಗುತ್ತಿದೆ. ಪಿಡಿಒ ಜವಾಬ್ದಾರಿ ಹೆಚ್ಚಿರುತ್ತದೆ. ಈ ಪಿಡಿಒಗಳು ಫಲಾನುಭವಿಗಳಿಗೆ ಸರಿಯಾದ ಮಾಹಿತಿ ನೀಡದೆ ಅಲೆದಾಡಿಸುತ್ತಾರೆ. ಈ ಬಗ್ಗೆಯೂ ಸರ್ಕಾರದ ಗಮನಸೆಳೆದಿದ್ದೇವೆ ಎಂದು ತಿಳಿಸಿದರು.

Also read: ಕಲಬೆರಕೆ ರಸಗೊಬ್ಬರ ಮಾರಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಡಿಸಿ
ಟ್ರೇಡ್ ಲೈಸೆನ್ಸ್ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚಿಸಲಿದ್ದು, ರಾಗಿ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯಿಸುತ್ತೇನೆ. ಹಾಗೂ ದೊಡ್ಡ ನಗರಗಳಲ್ಲಿ ಯೆಲ್ಲೋ ಬೋರ್ಡ್ ಇರುವ ವಾಹನಗಳಿಗೆ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಇದಕ್ಕೆ ತಿದ್ದುಪಡಿ ತರಲು ಯೋಚಿಸಲಾಗುತ್ತಿದೆ ಎಂದರು.

ಅಕ್ಕಿ ಸೇರಿದಂತೆ ಆಹಾರಧಾನ್ಯಗಳ ಮೇಲೆ ಜಿಎಸ್’ಟಿ. ವಿಧಿಸಿರುವ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅನಿವಾರ್ಯ ಕಾರಣಗಳಿಂದ ಜಿಎಸ್’ಟಿ. ವಿಧಿಸಬೇಕಾಗುತ್ತದೆ. ಈ ಹಣ ಕೂಡ ದೇಶದ ಅಭಿವೃದ್ಧಿಗೆ ಖರ್ಚಾಗುತ್ತದೆ. ಇನ್ನು ಆರು ತಿಂಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿದೆ ಎಂದರು.
ನಾನು ಈಗ ಆರ್ಯವೈಶ್ಯ ಸಮುದಾಯದ ನಿಗಮ ಮಂಡಳಿ ಅಧ್ಯಕ್ಷನಾಗಿಲ್ಲ ಎಂದು ಡಿ.ಎಸ್. ಅರುಣ್ ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎನ್.ಕೆ. ಜಗದೀಶ್, ಬಿ.ಆರ್. ಮಧುಸೂದನ್, ಹೃಷಿಕೇಶ್ ಪೈ, ಗಂಗಾಧರ್, ಸತೀಶ್, ದಿನೇಶ್ ಇದ್ದರು.










Discussion about this post