ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನುಭವಾಧಾರಿತ ಶಿಕ್ಷಣದಿಂದ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅಭಿಪ್ರಾಯಪಟ್ಟರು
ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜಯಪ್ರಕಾಶ್ ನಾರಾಯಣ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಖ್ಯಾತ ಸಂಶೋಧಕ ಎಡ್ವರ್ಡ್ ಪ್ರತಿಪಾದಿಸಿದ ಹಾಗೇ, ಓದು ಮತ್ತು ಬರವಣಿಗೆಯ ಕಲಿಕೆಗಿಂತ ಅನುಭವಾಧಾರಿತ ಕಲಿಕೆ ಮಕ್ಕಳಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯ. ಇದರಿಂದ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ವ್ಯಕ್ತಿತ್ವಗಳಾಗಿ ಹೊರಹೊಮ್ಮಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಸಧೃಡತೆ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಬದುಕಿನುದ್ದಕ್ಕೂ ದೈಹಿಕ ಸಧೃಡತೆಯನ್ನು ನಿರ್ವಹಿಸಲು ಪೂರಕವಾಗಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಡಿ.ಜಿ. ರಮೇಶ್ ಮಾತನಾಡಿ, ಅಮೃತಮಹೋತ್ಸವದ ಸಂಭ್ರಮದಲ್ಲಿರುವ ಎನ್ಇಎಸ್ ಸಂಸ್ಥೆಯ ಘನತೆಯನ್ನು ಎತ್ತಿಹಿಡಿಯುವಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪಾತ್ರ ಮಹತ್ವದಾಗಿದೆ. ಮತ್ತಷ್ಟು ಸಾಧನೆಗಳ ಮೂಲಕ ಓದಿದ ಸಂಸ್ಥೆಗೆ ಬೆಳೆದ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ಸಧೃಡರಾಗಿ ಎಂದು ಹೇಳಿದರು.
Also read: ಗುರಿ ಸಾಧನೆಗೆ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಶೋಭಾ ವೆಂಕಟರಮಣ ಸಲಹೆ
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಭಾನುಮತಿ ವಿಜಯಕುಮಾರ್, ಪ್ರಾಂಶುಪಾಲರಾದ ಕೆ. ಕೆಂಚಪ್ಪ, ವಿಜಯಲಕ್ಷ್ಮಿ, ಗುರುಪ್ರಸಾದ್, ದಯಾನಂದನಾಯ್ಕ್, ಡಾ.ಡಿ.ಕೆ. ಪಾಂಡೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post