ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರ ಘೋಷಿಸಿರು ವಿಧಿ ವಿಜ್ಞಾನ ವಿಶ್ವ ವಿದ್ಯಾಲಯವನ್ನು ಶಿವಮೊಗ್ಗಕ್ಕೆ ಮಂಜೂರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ (University of Forensic Science) ಸ್ಥಾಪನೆಗೆ ಹಸಿರು ನಿಶಾನೆ ದೊರೆತಿದೆ. ಇದು ಅತ್ಯಂತ ಸಂತೋಷದಾಯ ವಿಚಾರವಾಗಿದ್ದು, ಈ ವಿಶ್ವವಿದ್ಯಾಲಯವನ್ನು ನಮ್ಮ ರಾಜ್ಯಕ್ಕೆ ತರಲು ವಿಶೇಷ ಶ್ರಮ ವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಇಡಿಯ ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯು ಅಭಿವೃದ್ಧಿಯಲ್ಲಿ 2ನೆಯ ಸ್ಥಾನವನ್ನು ಹೊಂದಿದ್ದು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕೇಂದ್ರ ಸ್ಥಾನವಾಗಿದೆ. ಶಿವಮೊಗ್ಗ ನಗರದಲ್ಲಿ 2 ವೈದ್ಯಕೀಯ ಕಾಲೇಜುಗಳು, 2 ಇಂಜಿನಿಯರಿಂಗ್ ಕಾಲೇಜುಗಳು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಆಯುಷ್ ವಿಶ್ವವಿದ್ಯಾಲಯ, ಕೇಂದ್ರ ಕಾರಾಗೃಹ ಇದ್ದು, ಶಿವಮೊಗ್ಗ ನಗರವು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ ಎಂದಿದ್ದಾರೆ.
ಅಲ್ಲದೇ, ಶಿವಮೊಗ್ಗ ನಗರವು ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಟ್ಟಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಶಿವಮೊಗ್ಗದಿಂದ 8 ಕಿಮೀ ದೂರದಲ್ಲಿ ವಿಮಾನ ನಿಲ್ದಾಣದ ಕಾಮಗಾರಿಯೂ ಪ್ರಗತಿಯಲ್ಲಿದ್ದು, ಕೈಗಾರಿಕಾ ವಸಾಹತು ಪ್ರದೇಶವನ್ನು ಹೊಂದಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮಂಜೂರಾಗಿರುವ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿರುವ ಶಿವಮೊಗ್ಗದ ಜಿಲ್ಲಾ ಕೇಂದ್ರದಲ್ಲಿ ಸ್ಥಾಪನೆಗೆ ಮಂಜೂರು ಮಾಡಲು ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಅರುಣ್ ಅವರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post