ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ನಿರಂತರ ಮಳೆಯಿಂದ ತತ್ತರಿಸಿರುವ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಎರಡು ದಿನ ಆರೆಂಜ್ ಅಲರ್ಟ್, ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ ಸೆ.3ರ ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೆ.7ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಎಲ್ಲೆಲ್ಲಿ, ಯಾವತ್ತು ಯೆಲ್ಲೋ ಅಲರ್ಟ್?
ಸೆ.೩: ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ
ಸೆ.೪: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು
ಸೆ.೫: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ
ಸೆ.೬: ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ
ಸೆ.೭: ಗುಲ್ಬರ್ಗಾ, ರಾಯಚೂರು, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post