ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರ್ಗಿಲ್ ಯುದ್ಧದ ವಿಜಯ ಐತಿಹಾಸಿಕವಾಗಿದ್ದು, ಮಾತೃಭೂಮಿ ಹಾಗೂ ದೇಶದ ಸೇವೆಗೆ ಅವಕಾಶ ಸಿಗುವುದು ನಮ್ಮ ಪುಣ್ಯ. ದೇಶಕ್ಕಾಗಿ ಸೇನೆಯಲ್ಲಿ ಕೆಲಸ ಮಾಡಿದ ಅನುಭವ ವಿಶಿಷ್ಟವಾದುದು ಎಂದು ನಿವೃತ್ತ ಸೈನಿಕ ಎನ್.ಎಸ್. ಉಪಾಧ್ಯ ಹೇಳಿದರು.
ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ರೋಟರಿ ಪೂರ್ವ ವಾರದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಸೈನಿಕನಾಗಿ ಸೇವೆ ಸಲ್ಲಿಸುವ ಅವಕಾಶದಲ್ಲಿ ಎಂತಹ ಕಷ್ಟ ಬಂದರೂ ಎದುರಿಸುವ ಮನೋಭಾವ ನಮ್ಮಲ್ಲಿ ಬೆಳೆಯುತ್ತದೆ. ಕಠಿಣ ಪರಿಸ್ಥಿತಿಗಳಲ್ಲೂ ಎಲ್ಲ ಸೈನಿಕರು ದೇಶಕ್ಕಾಗಿ ಹೋರಾಡಿ ಎದುರಾಳಿಗಳನ್ನು ಸದೆಬಡಿಯುತ್ತಾರೆ. ದೇಶದ ರಕ್ಷಣೆಗಾಗಿ ಸೈನಿಕರು ತಮ್ಮ ಜೀವವನ್ನೇ ಮುಡಿಪಾಗಿಡುತ್ತಾರೆ ಎಂದು ತಿಳಿಸಿದರು.

Also read: ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮುಖ್ಯ: ಡಾ. ಬಿ. ಸುರೇಶ್
ಇದೇ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶದ ಸೇನೆಯಲ್ಲಿ ಸೇವೆ ಮಾಡಿರುವ ವೀರಯೋಧ ಎನ್.ಎಸ್. ಉಪಾಧ್ಯ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಾದ ಶ್ರೇಯಾ, ಚಂದನ ಹಾಗೂ ಪ್ರಜ್ವಲ್ ಅವರು ದೇಶಭಕ್ತಿ ಗೀತೆಗಳನ್ನು ಹಾಡಿದರು.











Discussion about this post