ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೀತಿಸಿದವನು ತನ್ನನ್ನು ಬಿಟ್ಟು ಬೇರೆ ಮದುವೆಯಾದನೆಂದು ನೊಂದ ಯುವತಿಯೊಬ್ಬಳು ಪ್ರಿಯಕರನ ಮದುವೆ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಓ.ಟಿ. ರಸ್ತೆಯ ನಿವಾಸಿ ರೂಪಶ್ರೀ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಪಶ್ರೀ ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಇತ್ತೀಚೆಗೆ ಬೇರೆ ಯುವತಿಯ ಜೊತೆ ಮದುವೆ ಆಗಲು ಮುಂದಾಗಿದ್ದರು. ಇದರಿಂದ ರೂಪಶ್ರೀ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.

ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದು, ಇತ್ತ ರೂಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಮುರುಳಿ ಮದುವೆ ಮನೆಯಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
Also read: ಏ.2ರಿಂದ ’ರಜಾ ವಿತ್ ಮಜಾ’ ಬೇಸಿಗೆ ಶಿಬಿರ
ಯುವತಿಯ ಪೋಷಕರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮದುವೆಯಾದ ಯುವತಿ ಆತ್ಮಹತ್ಯೆಗೆ ಯತ್ನ:
ಮುರುಳಿ ಮದುವೆಯಾದ ಯುವತಿಗೆ ಈ ವಿಚಾರ ತಿಳಿದು, ಆಕೆಯೂ ಸಹ ಕಲ್ಯಾಣ ಮಂದಿರದಲ್ಲಿಯೇ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















