ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಕಳೆದ ಒಂದು ವಾರದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿರುವುದರಿಂದ ಮೇಯರ್ ಸುನೀತಾ ಅಣ್ಣಪ್ಪ ಇಂದು ನ್ಯೂ ಮಂಡ್ಲಿಯಲ್ಲಿರುವ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿದರು.
ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮಂಡ್ಲಿಯ ನೀರು ಸರಬರಾಜು ಘಟಕದಲ್ಲಿ ಒಂದು ವಾರದಿಂದ 3 ಮೆಸ್ಕಾಂ ಟಿಸಿಗಳು ಒಂದಾದ ಮೇಲೊಂದರಂತೆ ಸುಟ್ಟು ಹೋಗುತ್ತಿರುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿದ್ದು, ಮೆಸ್ಕಾಂ, ಜಲಮಂಡಳಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮೇಯರ್ ಸುನೀತಾ ಅಣ್ಣಪ್ಪ ಬೇಟಿ ನೀಡಿ, ತಕ್ಷಣ ಹೊಸ ಟಸಿ ಅಳವಡಿಸುವ ಕೆಲಸ ಆರಂಭಿಸುವಂತೆ ತಾಕೀತು ಮಾಡಿದರು.
Also read: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ: ಈಶ್ವರಪ್ಪ ಭವಿಷ್ಯ
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮಹಾನಗರ ಪಾಲಿಕೆ ಸದಸ್ಯ ರಾಹುಲ್ ಬಿದಿರೆ, ಪ್ರಭಾಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post