ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೀಪ ನಂದುವ ಸಂದರ್ಭದಲ್ಲಿ ಜೋರಾಗಿ ಉರಿಯುವಂತೆ, ಕಾಂಗ್ರೆಸ್‌ನ ನಾಯಕರಾದ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ನಾವು ಜೀವಂತವಾಗಿದ್ದೇವೆ ಎಂದು ತಿಳಿಸಲು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅಬ್ಬರಿಸುತ್ತಿದ್ದಾರೆ. ಯಾವಾಗ ದೀಪ ಆರುವುದೋ ಗೊತ್ತಿಲ್ಲ ಎಂದು ಶಾಸಕ ಕೆ.ಎ.ಸ್. ಈಶ್ವರಪ್ಪ MLA Eshwarappa ಲೇವಡಿ ಮಾಡಿದರು.
ನಗರದ ಕೋರ್ಪಲಯ್ಯನ ಛತ್ರದ ಬಳಿ ತುಂಗಾ ನದಿಗೆ ಬಾಗಿನ ಅರ್ಪಿಸಿ ನಂತರ ಮಾತನಾಡಿದ ಅವರು, ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪರಿಣಾಮ ಮುಖ್ಯಮಂತ್ರ ಮತ್ತು ಗೃಹಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಇಂತಹ ಎಷ್ಟು ಅಕ್ರಮಗಳು ನಡೆದಿಲ್ಲ ಅದರ ಬಗ್ಗೆ ತನಿಖೆ ನಡೆಸಲಾಗಿದೆಯೇ ಎಂದು ಪ್ರಶ್ನಿಸಿದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿದ್ಧರಾಮಯ್ಯ ಹೇಳುತ್ತಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ಶಾಸಕ ಈಶ್ವರಪ್ಪ, ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ 28 ಸ್ಥಾನ ಗೆಲ್ಲುವುದು ಖಚಿತ ಎಂದು ಹೇಳುತ್ತಿದ್ದರು. ಆದರೆ, ಬಿಜೆಪಿ 25 ಸ್ಥಾನ ಪಡೆದು ಕಾಂಗ್ರೆಸ್‌ಗೆ ೨ ಸ್ಥಾನ ಲಭಿಸಿತು. ಹಾಗೆಯೇ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣಬೇಡಿ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದರು.
Also read: ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗದಲ್ಲಿ ನಾಳೆ ಆರೆಂಜ್, 10ರವರೆಗೂ ಯೆಲ್ಲೋ ಅಲರ್ಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















