ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ Bajarangadal activist Harsha murder ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದ್ದು, ಆರೋಪಿಗಳನ್ನು ಇವರ ವಶಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Central Minister Shobha Karandlaje ಸೇರಿದಂತೆ ಹಲವು ಪ್ರಮುಖರು ಒತ್ತಾಯ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗೃಹ ಇಲಾಖೆ ಎನ್‌ಐಎಗೆ NIA ವಹಿಸಿದೆ. ಈ ಹಿನ್ನೆಲೆಯಲ್ಲಿ ತನಿಖೆ ಪ್ರಾರಂಭಗೊಂಡಿದ್ದು, ವಿಚಾರಣೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹರ್ಷ ಹತ್ಯೆ ಪ್ರಕರಣದ ಆರೋಪಿಗಳನ್ನು ಮೂವರನ್ನು ಮೈಸೂರು, ನಾಲ್ವರನ್ನು ಬಳ್ಳಾರಿ ಉಳಿದವರನ್ನು ಬೆಳಗಾವಿ ಜೈಲಿಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿತ್ತು. ಆದರೆ, ಎನ್‌ಐಎ ತನಿಖೆ ಆರಂಭವಾದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ವರ್ಗಾಯಿಸಿಕೊಂಡು ಆನಂತರ ತನಿಖೆ ಆರಂಭವಾಗಲಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post