ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಬಿಜೆಪಿ ವತಿಯಿಂದ ಅ.30 ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅ.9 ರಂದು ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದ ಹಿನ್ನಲೆಯಲ್ಲಿ ಪೂರ್ವಭಾವಿ ಪ್ರವಾಸವನ್ನು ಪಕ್ಷದ ಮುಖಂಡರು ಹಮ್ಮಿಕೊಂಡಿದ್ದು, 5 ತಂಡ ರಚಿಸಲಾಗಿದೆ. ಪೂರ್ವಭಾವಿ ಸಭೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದಲೂ ಸುಮಾರು 3 ಸಾವಿರ ಹಿಂದುಳಿದ ವರ್ಗದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅ.30ರ ಕಲಬುರಗಿ ಸಮಾವೇಶದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

2 ನೇ ತಂಡದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಸೆ. 27 ರಂದು ಮಂಗಳೂರು, ಉಡುಪಿ, ಅ. 3 ರಂದು ರಾಯಚೂರು, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. 3 ನೇ ತಂಡದ ನೇತೃತ್ವವನ್ನು ಸಚವಿ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಸೆ. 28 ರಂದು ಕೋಲಾರ, ಚಿಕ್ಕಬಳ್ಳಾಪುರ, 29 ರಂದು ಬೆಂಗಳೂರು ಗ್ರಾಮಾಂತರ, ಉತ್ತರ, ದಕ್ಷಿಣ ಹಾಗೂ ರಾಮನಗರ ಪ್ರವಾಸ ಕೈಗೊಂಡಿದ್ದಾರೆ ಎಂದರು.

ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ನವರು ಏನೂ ಮಾಡಿಲ್ಲ. ಖಾಲಿ ಡಬ್ಬ ಅಲುಗಾಡಿಸಿ ಶಬ್ಧ ಜಾಸ್ತಿ ಮಾಡಿದ್ದು ಬಿಟ್ಟರೆ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ. ಹಿಂದುಳಿದ ವರ್ಗದ ಸಮಾವೇಶ ಮಾಡದೇ ಸಿದ್ಧರಾಮೋತ್ಸವ ಮಾಡಿದ್ದಾರೆ. ಈಗಾಗಲೇ ಡಿಕೆಶಿ ಸರ್ವಾಧಿಕಾರಿ ಧೋರಣೆ ವಿರುದ್ಧ ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ವಿಭಜನೆಯತ್ತ ಸಾಗಿದೆ. ಹಿಂದುಳಿದ ವರ್ಗದ ಬಗ್ಗೆ ಕಾಂತರಾಜ್ ವರದಿಯನ್ನು 140 ಕೋಟಿ ರೂ. ವೆಚ್ಚದಲ್ಲಿ ತಯಾರಿಸಿ ಅದನ್ನು ವಿಧಾನಸಭೆಯಲ್ಲಿ ಮಂಡಿಸಲಿಲ್ಲ. ಆ ವರದಿಗೆ ಮುಖ್ಯ ಕಾರ್ಯದರ್ಸಿ ಸಹಿಯನ್ನೇ ಹಾಕಿಲ್ಲ. ಮೂಗಿಗೆ ತುಪ್ಪ ಸವರಿ ಕಾಂಗ್ರೆಸ್ ನವರು ಹಿಂದುಳಿದ ವರ್ಗಕ್ಕೆ ಮೋಸ ಮಾಡಿದ್ದಾರೆ. ಹಿಂದುಳಿದವರ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದರು.

Also read: ಸೆ.26ರಿಂದ ಅ.4ರವರೆಗೆ ಅದ್ಧೂರಿ ಸಾಂಸ್ಕೃತಿಕ ದಸರಾ ಆಚರಣೆ: ಎಸ್.ಜಿ. ರಾಜು
‘ಪೇ ಸಿಎಂ’ ಪೋಸ್ಟರ್ ಬಗ್ಗೆ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಇಷ್ಟು ನೀಚಮಟ್ಟಕ್ಕೆ ಇಳಿಬಾರದಿತ್ತು. ಕಂಟ್ರ್ಯಾಕ್ಟ್ ಅಸೋಸಿಯೇಷನ್ ಅಧ್ಯಕ್ಷ ಕಾಂಗ್ರೆಸಿಗರ ಚೇಲಾ ಕೆಂಪಣ್ಣ ಪ್ರಧಾನಿ ಮೋದಿಗೂ ಪತ್ರ ಬರೆದು ಆರೋಪ ಮಾಡಿದರು. ಆದರೆ, 40 ಪರ್ಸೆಂಟ್ ಕಮಿಷನ್ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆಯಾಗಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಮತ ಬ್ಯಾಂಕ್ ನಲ್ಲಿ ಶೇ. 40 ರಷ್ಟು ಮತಗಳು ಕಡಿಮೆಯಾಗಲಿವೆ ಎಂದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್.ಡಿ.ಪಿ.ಐ., ಪಿಎಫ್ಐ ಮುಂತಾದ ಸಂಘಟನೆಗಳು ರಾಷ್ಟ್ರದ್ರೋಹದ ಸಂಘಟನೆಗಳಾಗಿ ಹೊರ ಹೊಮ್ಮುತ್ತಿವೆ. ಬಿಜೆಪಿ ಇಂತಹ ಸಂಘಟನೆಗಳ ಬಗ್ಗೆ ಹುಷಾರಾಗಿರಬೇಕೆಂದು ಆಗಾಗ ಎಚ್ಚರಿಸುತ್ತಾ ಬಂದಿದೆ. ಆದರೂ, ಮುಸ್ಲಿಂ ಯುವಕರು ಪ್ರಚೋದನೆಗೆ ಒಳಗಾಗಿ ಐಎಸ್ಐ ಉಗ್ರ ಸಂಘಟನೆಗೆ ಸೇರುತ್ತಿದ್ದಾರೆ. ಇದು ತುಂಬಾ ಅಪಾಯಕಾರಿ ಎಂದರು.
ಮುಸ್ಲಿಂ ಸಮಾಜದ ಹಿರಿಯರು ಇವರನ್ನು ಹದ್ದುಬಸ್ತಿನಲ್ಲಿಡಬೇಕಾಗಿದೆ. ಇಲ್ಲದಿದ್ದರೆ ಇವರು ಬಾಂಬ್ ತಯಾರಿಸಿಯೋ ಅಥವಾ ತರಬೇತಿ ಪಡೆದೋ, ಚಾಕು ಚೂರಿ ಸಂಸ್ಕೃತಿ ಹೊಂದಿ ರಾಷ್ಟ್ರದ್ರೋಹಿಗಳಾಗಿ, ಭಯೋತ್ಪಾದಕರಾಗಿ ಜೈಲು ಸೇರುವುದು ಖಚಿತ. ಇಂತಹ ಸಂಘಟನೆಗಳಿಗೆ ವಿದೇಶಗಳಿಂದ ಕೋಟ್ಯಂತರ ರೂ. ಹರಿದು ಬರುತ್ತಿದೆ ಎಂದರು.











Discussion about this post