ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳು ಬೇಸರ ಮೂಡಿಸಿದೆ. ಅನ್ಯಕೋಮಿನ ಕೆಲವು ಕಿಡಿಗೇಡಿಗಳಿಂದ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನಾರ್ಯ ಸಂಗತಿ. ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ. ಹರಿಕೃಷ್ಣ ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಶ್ರಮದ ಫಲವಾಗಿ ಜಿಲ್ಲೆ ಉತ್ತಮ ಅಭಿವೃದ್ಧಿ ಹೊಂದಿದ್ದು, ಇದು ಸಂತಸದ ವಿಷಯವಾಗಿದೆ. ಆದರೆ ಹರ್ಷ ಹಿಂದು ಕೊಲೆ ನಡೆದ ನಂತರದ ದಿನಗಳಲ್ಲಿ ಶಿವಮೊಗ್ಗ ನಗರದಲ್ಲಿ ನಿನ್ನೆವರೆಗೂ ಹಿಂದೂ ಸಮಾಜ ಬಾಂಧವರ ಮೇಲೆ ಅನ್ಯಕೋಮಿನವರಿಂದ ನಡೆಯುತ್ತಿರುವ ಹಲ್ಲೆ, ಕೊಲೆ ಬೆದರಿಕೆ, ಘಟನೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಇತ್ತೀಚೆಗೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ವಿಷಾದನೀಯ ಸಂಗತಿಯಾಗಿದೆ. ಈ ದುಷ್ಕೃತ್ಯಗಳಲ್ಲಿ ಡ್ರಗ್ ಮಾಫಿಯಾ ಕರಿನೆರಳು ಎದ್ದು ಕಾಣುತ್ತಿದ್ದು, ಹಲ್ಲೆ ನಡೆಸಿದವರನ್ನು ಬಂಧಿಸಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ಡ್ರಗ್ಸ್ ಮಾಫಿಯಾದ ಬಗ್ಗೆ ಸರಿಯಾದ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
Also read: ಸುಪ್ರಿಂ ಕೋರ್ಟ್ ನಿರ್ದೇಶನದ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ
ಅಭಿನಂದನೆ:
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ವಹಿಸಿಕೊಂಡು 2ವರ್ಷ ಆಗಿರುವ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕರಿಗೆ, ಪಕ್ಷದ ಕಾರ್ಯಕರ್ತರು ಹಾಗೂ ಪತ್ರಕರ್ತರಿಗೆ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುಹಾಸ್ ಶಾಸ್ತ್ರಿ, ಗಣೇಶ್ ಬಿಳಕಿ, ನಗರ ಯುವ ಮೋರ್ಚಾ ಅಧ್ಯಕ್ಷ ಆರ್. ವಿ. ದರ್ಶನ್, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಮಹಾನಗರ ಪಾಲಿಕೆ ಸದಸ್ಯ ಈ. ವಿಶ್ವಾಸ್ , ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ರೊಡ್ರಿಗಸ್, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಸುಧೀಂದ್ರ ಕಟ್ಟೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post