ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಜುಲೈ 15 ರಂದು ‘ವಿಶ್ವ ಯುವ ಕೌಶಲ್ಯ’ ದಿನಾಚರಣೆಯ ಅಂಗವಾಗಿ ಕೌಶಲ್ಯ ಸ್ಪೂರ್ತಿ ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿರುತ್ತಾರೆ.
ನಗರದ ಕಸ್ತೂರಿಬಾ ಮಹಿಳಾ ಪಿಯು ಕಾಲೇಜಿನ ಕು.ವರ್ಷಿತಾ ಬಿ.ಟಿ ದ್ವಿತೀಯ ಸ್ಥಾನ ಹಾಗೂ ಆನವಟ್ಟಿಯ ಸೈಂಟ್ ಹೋಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕು. ಸಿಂಚನಾ ಎಸ್.ಕೆ. ತೃತೀಯ ಸ್ಥಾನ ಪಡೆದಿದ್ದು ಇವರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪರವಾಗಿ ಅಭಿನಂದನೆಗಳನ್ನು ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.
Also read: ಸರ್ಕಾರದ ವಿವಿಧ ಇಲಾಖೆಗಳ ನೂತನ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಕಾರ್ಯಕ್ರಮ: ಸಿಎಂ ಭಾಗಿ

 
	    	



 Loading ...
 Loading ... 
							



 
                
Discussion about this post