ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಪುನೀತ್ ರಾಜ್‌ಕುಮಾರ್ Puneeth Rajkumar ಜನ್ಮದಿನದ ಅಂಗವಾಗಿ ಅಭಿಮಾನಿಗಳಿಂದ ನೆಹರೂ ರಸ್ತೆ ಹಾಗೂ ಬಾಲರಾಜ್ ಅರಸು ರಸ್ತೆಗಳಲ್ಲಿ ಅಪ್ಪು ಅವರ ಸಿನಿ ಪಯಣದ ಎಲ್ಲಾ ನೆನಪಗಳು ಈ ಫ್ಲೆಕ್ಸಿಗಳ ಕಟೌಟ್‌ಗಳಲ್ಲಿ ರಾರಾಜಿಸುತ್ತಿವೆ.
ಮಾ.17ರಂದು ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನವಿದ್ದು, ಈ ದಿನದಂದು ಜೇಮ್ಸ್ ಚಿತ್ರವು ಬಿಡುಗಡೆಯಾಗುವುದರಿಂದ ಈ ಎಲ್ಲಾ ಸಿದ್ದತೆಗಳನ್ನು ಮಾಡಲಾಗುತ್ತಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ನಮ್ಮೊಂದಿಗೆ ಇಲ್ಲದೆ ಇದ್ದರೂ ಸಹ ರಾಜ್ಯದ ಪ್ರತಿಯೊಬ್ಬ ಅಭಿಮಾನಿಗಳಲ್ಲಿ ಬೆರತು ಹೋಗಿದ್ದಾರೆ.
Also read: ಶಿವಮೊಗ್ಗದ ಪಿಇಎಸ್ ಪಬ್ಲಿಕ್ ಶಾಲೆಗೆ ಶೇ.100ರಷ್ಟು ಫಲಿತಾಂಶ
ಅಪ್ಪು ಅವರು ನಟನೆಯ ಜೊತೆಗೆ ಸಾಮಾಜಿಕ ಕೆಲಸಗಳು, ಅಭಿಮಾನಿಗಳೊಂದಿಗೆ ಇರುತ್ತಿದ್ದ ರೀತಿ ಎಲ್ಲವೂ ಮಾದರಿ. ಕರ್ನಾಟಕ ರಾಜರತ್ನ ಪುನೀತ್ ರಾಜ್ ಕುಮಾರ್ ಅವರನ್ನು ಜನ ಇಂದಿಗೂ ಆರಾಧನೆ ಮಾಡುತ್ತಲೇ ಬಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post