ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೌಟುಂಬಿಕ ಕಲಹದಿಂದ ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು ರಕ್ಷಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಹೊರನಾಡಿನ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಮಂಜುಳಾ ಅವರ ಪತಿ ಶಿವಕುಮಾರ್ ಭಟ್ ಮತ್ತು ಅತ್ತೆಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಎನ್ನಲಾಗಿದೆ.
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿರುವ ತನ್ನ ಸಹೋದರಿಯ ಮನೆಗೆ ಬಂದಿದ್ದ ಮಹಿಳೆ ಅಕ್ಕನ ಮಗಳು ಬೆಂಗಳೂರಿಗೆ ಹೋಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ರೈಲ್ವೆ ಹಳಿಯ ಮೇಲೆ ಹೋಗುತ್ತಿರುವುದನ್ನು ಗಮನಿಸಿ ಸಾರ್ವಜನಿಕರು ಆಕೆಯ ಮನವೊಲಿಸಿ ನಗರದ ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
Also read: ಮಗುವಿನ ಶವವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ! ಏನಿದು ಘಟನೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post