No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2022
in ಶಿವಮೊಗ್ಗ
0
ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆದ್ಯತಾ ವಲಯಗಳಿಗೆ ನಿಗಧಿಪಡಿಸಿದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೂರನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೊಳಚೆ ಪ್ರದೇಶದ ನಿವಾಸಿಗಳು ಇರುವ ಸ್ಥಳದಲ್ಲಿಯೇ ಸೂರೊಂದನ್ನು ನಿರ್ಮಿಸಿಕೊಂಡು ನೆಮ್ಮದಿಯ ದಿನಗಳನ್ನು ಕಳೆಯಲು ಅನುಕೂಲವಾಗುವಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಯೋಜನೆಗಳಡಿಯಲ್ಲಿ ಸಹಾಯಧನದೊಂದಿಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸುವ ಮೂಲಕ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು.

ಹಲವು ಬ್ಯಾಂಕುಗಳಲ್ಲಿ ಶಿಕ್ಷಣ ಮತ್ತು ವಸತಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ನೀಡಿರುವ ಸಾಲದ ಪ್ರಮಾಣ ಗಣನೀಯ
ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಪ್ರಗತಿ ನಿರಾಶಾದಾಯಕವಾಗಿದೆ ಎಂದರು.

Also read: ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದ ನಟ ಸುದೀಪ್

ಉದ್ದೇಶಿತ ಯೋಜನೆಗಳಿಗೆ ನಿಗಧಿಪಡಿಸಿದ ಹಣವನ್ನು ಸೂಚಿಸಲಾಗಿರುವ ಕಾಲಾವಧಿಯಲ್ಲಿಯೇ ಬಿಡುಗಡೆಗೊಳಿಸಿ ಪ್ರಗತಿ ವರದಿ ನೀಡುವಂತೆ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ಅರ್ಹರಿಗೆ ಸಾಲಸೌಲಭ್ಯ ನೀಡುವಲ್ಲಿ ನಿರ್ಲಕ್ಷ್ಯ ಸಲ್ಲದು. ಹಾಗೂ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಧಾವಿಸುವ ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿದ ಸಂಸದರು, ಸೌಲಭ್ಯ ಒದಗಿಸುವಲ್ಲಿ ಸಣ್ಣಪುಟ್ಟ ನ್ಯೂನತೆಗಳಿದ್ದಲ್ಲಿ ಅವುಗಳನ್ನು ಸರಿದೂಗಿಸಿಕೊಂಡು ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿ ಸಹಕರಿಸುವಂತೆ ಹಾಗೂ ಯಾವುದೇ ಅರ್ಜಿಗಳನ್ನು ಸಲ್ಲದ ನೆಪವೊಡ್ಡಿ ತಿರಸ್ಕರಿಸದಂತೆ ಮನವಿ ಮಾಡಿದರು.

ಇಂದಿನ ಹಾಗೂ ಹಿಂದಿನ ಸಭೆಗೆ ಸತತವಾಗಿ ಗೈರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪುವಂತೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಸೂಚಿಸಿದರು.

ಪಿಎಂಜೆಜೆಬಿವೈ. ಯೋಜನೆಯಡಿಯಲ್ಲಿ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವವರು 12ರೂ.ಗಳ ತಮ್ಮ ಮಾಸಿಕ ಕಂತನ್ನು ನಿರಂತರವಾಗಿ ಕಟ್ಟುವಂತೆ ಹಾಗೂ ಕಾಲಕಾಲಕ್ಕೆ ಗ್ರಾಹಕರಲ್ಲಿ ಅರಿವು ಮೂಡಿಸುವಲ್ಲಿ ಬ್ಯಾಂಕ್ ಸಿಬ್ಬಂದಿಗಳು ಸಕ್ರಿಯರಾಗುವಂತೆ ಸಲಹೆ ನೀಡಿದರು.

ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದ 75 ಜಿಲ್ಲೆಗಳಲ್ಲಿ ಡಿಟಿಜಿಟಲ್ ಬ್ಯಾಂಕುಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಡಿಜಿಟಲ್ ಬ್ಯಾಂಕೊಂದನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ದಿನಗಳಲ್ಲಿ ಬ್ಯಾಂಕುಗಳಂತೆ ಅಂಚೆ ಇಲಾಖೆಯೂ ಕಾರ್ಯನಿರ್ವಹಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾತನಾಡಿ, ಕೊಳಚೆ ಪ್ರದೇಶದಲ್ಲಿನ ನಿವಾಸಿಗಳು ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಾಲಸೌಲಭ್ಯ ಪಡೆಯಲು ಇರುವ ಸಮಸ್ಯೆಗಳ ಕುರಿತು ಸಂಬಂಧಿಸಿದ ಬ್ಯಾಂಕ್ ಪ್ರಬಂಧಕರು ಹಾಗೂ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಸುಪ್ರಿಯ ಬ್ಯಾನರ್ಜಿ, ಸಂದೀಪರಾವ್, ಬಿ.ರವಿ, ಯತೀಶ್ ಸೇರಿದಂತೆ ಜಿಲ್ಲಾ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share203Tweet123Send
Previous Post

ಜೇಮ್ಸ್ ಚಿತ್ರದ ಸಲಾಂ ಸೋಲ್ಜರ್ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದ ನಟ ಸುದೀಪ್

Next Post

ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನ

ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL