ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅಗ್ರಹಾರ ಹೋಬಳಿ ಹಾದಿಗಲ್ಲು ಗ್ರಾಮದಲ್ಲಿ ಜಮೀನೊಂದರ ಸಮೀಪದ ದರಗು ಪ್ರದೇಶದಲ್ಲಿನ ಮರದ ಮೇಲೆ ಕಂಡುಬಂದ, ಬೃಹದಾಕಾರದ ಕಾಳಿಂಗ ಸರ್ಪವನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ Snake Kiran ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ.
ವೆಂಕಟೇಶ್ ಎಂಬುವರ ಜಮೀನಿನಲ್ಲಿ ಸರ್ಪ ಕಾಣಿಸಿಕೊಂಡಿತ್ತು. ಈ ಕುರಿತಂತೆ ಅರಣ್ಯ ಇಲಾಖೆ ಹಾಗೂ ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಕಿರಣ್, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, ಮರದ ಮೇಲಿದ್ದ ಸರ್ಪವನನ್ನು ಸಂರಕ್ಷಿಸಿದ್ದಾರೆ.
Also read: ಆಕಸ್ಮಿಕ ರೈಲ್ವೇ ಅಪಘಾತಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತೆ ಬಿ.ಎನ್. ಕುಬೇರಪ್ಪ ಕರೆ
ಕಾಳಿಂಗ ಸರ್ಪವು ಸುಮಾರು 12 ಅಡಿ ಉದ್ದವಿದೆ. 9 ಕೆ.ಜಿ. ತೂಕದವಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಸರ್ಪವನ್ನು ಸಮೀಪದ ಅರಣ್ಯಕ್ಕೆ ಬಿಡಲಾಯಿತು ಎಂದು ಕಿರಣ್ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post