ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳು ನವೆಂಬರ್ ಮಾಸಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಹೇಳಿದರು.
ಅವರು ಇಂದು ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದ ಅವರು, ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗಧಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.

Also read: ಮಲೆನಾಡಿನಲ್ಲಿ ಉಗ್ರರ ಕರಿನೆರಳು: ಶಿವಮೊಗ್ಗಕ್ಕೆ `ರಾ’ ಟೀಂ ಎಂಟ್ರಿ?
ಈಗಾಗಲೇ ಗತಿಶಕ್ತಿ ಯೋಜನೆಯಡಿ ಕೇಂದ್ರ ಸರ್ಕಾರವು 65ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶೀಥಲೀಕರಣ ಘಟಕಗಳು, ಗೋದಾಮುಗಳು, ಕಿರು ಉದ್ಯಮ ಘಟಕಗಳ ಆರಂಭದಿಂದಾಗಿ ಸರಕು-ಸಾಗಾಟಕ್ಕೆ ಅನುಕೂಲವಾಗಲಿದೆ ಎಂದರು.












Discussion about this post