ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರ್’ಎಸ್’ಎಸ್’ಎಸ್ ವಿರುದ್ಧ ಅನಾವಶ್ಯಕವಾಗಿ ಮಾತನಾಡುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತಲೆ ಕೆಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಟಿಕಿಯಾಡಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯಗೆ ತಲೆ ಕೆಟ್ಟಿದೆ. ಯಾಕೋ ಇತ್ತೀಚೆಗೆ ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳೂ ಸಹ ಆರ್’ಎಸ್’ಎಸ್’ನಿಂದ ಬಂದವರು. ಸಂಘ ಪರಿವಾರದ ಬಗ್ಗೆ ಸರಿಯಾಗಿ ತಿಳಿಯದೇ ಮಾತನಾಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವಂತಹದ್ದಲ್ಲ ಎಂದು ಕಿಡಿ ಕಾರಿದರು.
Also read: ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ಪಣ: ಮಾಜಿ ಸಿಎಂ ಯಡಿಯೂರಪ್ಪ























Discussion about this post