ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ರಾತ್ರಿ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ SP Lakshmi Prasad ತಿಳಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿರುವ ಅವರು, ನಿನ್ನೆ ರಾತ್ರಿ ಬೈಕ್‌ನಲ್ಲಿ ಕಾರನ್ನು ಹಿಂಬಾಲಿಸಿ, ಕಬ್ಬಿಣದ ಸಲಾಕೆಯಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ನನ್ನು ಬಂಧಿಸಲಾಗಿದೆ. ಹಾಗೂ ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ರಸ್ತೆ ಕಿಷ್ಕಿಂದೆಯಾಗಿದ್ದರಿಂದ ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದವರು ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ಧಾರೆ ಎಂಬುದು ತಿಳಿದಿದ್ದು, ಗಾಂಜಾ ಸೇವನೆ ಮಾಡಿದ್ದರ ಇಲ್ಲವೇ ಎನ್ನುವುದರ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
Also read: ಮಹಿಳಾ ನೌಕರರೊಂದಿಗೆ ಬೆರೆತು ಕ್ರೀಡಾ ಸ್ಫೂರ್ತಿ ಮೆರೆದ ಕುಲಸಚಿವೆ ಅನುರಾಧ
ಬೆಂಗಳೂರು ಮೂಲದ ಇಬ್ಬರು, ತಮ್ಮ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರೇ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಓರ್ವನ ಮೇಲೆ ಈ ಹಿಂದೆ ಗಾಂಜಾ ಕೇಸ್ ಕೂಡ ದಾಖಲಾಗಿತ್ತು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post