Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ Ayanuru Manjunath ಹೇಳಿದರು.
ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾನವಂದಿ ಗ್ರಾಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 2021-22 ನೇ ಸಾಲಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿಶೇಷವಾಗಿ ಇತಿಹಾಸದ ಪರಿಜ್ಞಾನ ಅತ್ಯಂತ ಅಗತ್ಯ. ನಮ್ಮ ಶಿವಮೊಗ್ಗ ಜಿಲ್ಲೆಯ ಇತಿಹಾಸವು ನಿಜಕ್ಕೂ ವಿಶೇಷವಾದುದು. ಕೆಳದಿಯ ಚೆನ್ನಮ್ಮ ನಂತಹ ಧೀರ ಮಹಿಳೆ ಔರಂಗಜೇಬ ನಂತಹ ವ್ಯಕ್ತಿಯನ್ನು ಸೋಲಿಸಿದ ಹಿರಿಮೆಯನ್ನು ಹೊಂದಿದ್ದಾಳೆ. ಉಡುತಡಿಯಲ್ಲಿ ಹುಟ್ಟಿದ ಅಕ್ಕಮಹಾದೇವಿ ನಮ್ಮ ಜಿಲ್ಲೆಯವರು ಎನ್ನುವುದು ನಮಗೆ ಹೆಮ್ಮೆ. ಎನ್ಎಸ್ಎಸ್ ನಂತಹ ಶಿಬಿರಗಳು ಸ್ಥಳೀಯ ಜ್ಞಾನವನ್ನು ಅರಿತುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ತಿಳಿಸಿದರು.
Also read: ಸರ್ಕಾರಿ ಆದೇಶ ಬೇಕಿಲ್ಲ, ಕುರಾನ್ ಫಾಲೋ ಮಾಡುತ್ತೇವೆ, ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಬಿಡಿ: ವಿದ್ಯಾರ್ಥಿನಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎಂ.ಕೆ. ವೀಣಾ ಮಾತನಾಡಿ, ಸಮಾಜ ಮತ್ತು ಸಂಸ್ಕೃತಿಯ ಪ್ರಜ್ಞೆಯಿಂದಲೇ ನಮ್ಮ ವ್ಯಕ್ತಿತ್ವವು ಬೆಳೆಯುತ್ತದೆ. ಜ್ಞಾನ ಬುದ್ಧಿ ಮತ್ತು ವಿವೇಕವು ಶಿಕ್ಷಣದಿಂದ ಲಭಿಸುತ್ತದೆ. ಶ್ರಮಯುಕ್ತ ಬದುಕಿನ ಜೀವನ ಶೈಲಿ ಯುವಜನರಲ್ಲಿ ಕಣ್ಮರೆಯಾಗುತ್ತಿದೆ. ಎನ್ಎಸ್ಎಸ್ ನಂತಾ ಶಿಬಿರಗಳು ಗ್ರಾಮೀಣ ಸಮುದಾಯಗಳ ಕಷ್ಟಗಳನ್ನು ಅರ್ಥ ಮಾಡಿಸುವಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ಸ್ವಚ್ಛತೆ ನೈರ್ಮಲ್ಯದ ಪರಿಜ್ಞಾನವನ್ನು ನಮ್ಮಲ್ಲೂ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.

ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ವಾಗ್ದೇವಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಪ್ರೀತಿಯನ್ನು ಬೆಳೆಸಿಕೊಂಡಾಗ ದೇಶ ಸಮೃದ್ಧವಾಗುತ್ತದೆ. ಇಂದು ನಮಗೆ ಬೇಕಾಗಿರುವುದು ಶುದ್ಧವಾದ ಗಾಳಿ, ಸ್ವಚ್ಛವಾದ ನೀರು. ಇದನ್ನು ಪಡೆಯಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಮಂಡಗಟ್ಟ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಶೋಭಾ ಶಿವಪ್ಪ, ಪಂಚಾಯತ್ ಸದಸ್ಯ ಉಮೇಶ್, ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಕೆ.ಎಸ್. ಡಾ. ಸರಳಾ, ಪ್ರಾಧ್ಯಾಪಕರಾದ ಡಾ. ಕುಂದನ್ ಬಸವರಾಜ್, ಬಾಲಸ್ವಾಮಿ, ಗಿರೀಶ್ ಕಾರಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಅಧಿಕಾರಿ ಡಾ. ಶುಭಾ ಮರವಂತೆ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಸ್ನೆಹಶ್ರೀ ಕಾರ್ಯಕ್ರಮ ನಿರೂಪಿಸಿದರು. ಕು. ಸುಪ್ರಿಯಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post