ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲ್ಲೂಕು ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪಿಡಿಒಗಳಿಗೆ ಕ್ರೀಡಾ ಆಯೋಜಿಸಿರುವುದು ಒಂದು ವಿಶೇಷ ಪ್ರಯತ್ನವಾಗಿದ್ದು, ಈ ಕಾರ್ಯಕ್ಕೆ ತಾವು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಒಲಂಪಿಕ್ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಾಯದೊಂದಿಗೆ ಶಿವಮೊಗ್ಗ ತಾಲೂಕು ಮಟ್ಟದ ಪಂಚಾಯತ್ ಕ್ರೀಡೋತ್ಸವ-2022 ಕಾರ್ಯಕ್ರಮಕ್ಕೆ ದೀಪಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಈರೀತಿಯ ಕ್ರೀಡಾಕೂಟ ಹಮ್ಮಿಕೊಳ್ಳಲು ತಾವು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ. ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಮಾಡುವ ಮೂಲಕ ಹಸಿರು ಕ್ರಾಂತಿ ಮಾಡುವಂತೆ ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.
Also read: ಪರಿಸರ ಪ್ರೀತಿ ನಿತ್ಯನಿರಂತರವಾಗಿರಲಿ: ಸಾಗರ ಶಾಸಕ ಹಾಲಪ್ಪ ಕರೆ
ಕ್ರೀಡೋತ್ಸವದ ಧ್ವಜ ನೆರವೇರಿಸಿದ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಮಾತನಾಡಿ, ಒತ್ತಡದ ಬದುಕಿನ ನಡುವೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರತಿಭೆಗಳು ಹೊರಹೊಮ್ಮುತ್ತದೆ. ಗುಡ್ಡಪ್ಪ ಜೋಗಿ ಸೇರಿದಂತೆ ಅನೇಕ ಜನ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರತಿಭೆಗಳಿಗೆ ವೇದಿಕೆಯ ಸಿಗುವುದಿಲ್ಲ ಭಾಗಿಯಾಗಲು ಕರೆದರು.
ಗ್ರಾಮೀಣಾಭಿವೃದ್ಧಿಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ಯುವ ಸಮಾವೇಶವನ್ನ ಹಮ್ಮಿಕೊಳ್ಳುವ ಮೂಲಕ ಪ್ರತಿಭೆಯನ್ನ ಹೊರಗೆ ತೆಗೆಯೋಣ ಎಂದು ಒತ್ತಾಯಿಸಿದರು.
ಎಂಎಲ್ ಸಿ ಡಿ.ಎಸ್. ಅರುಣ್ ಮಾತನಾಡಿ, ಕ್ರೀಡೋತ್ಸವದ ಜೊತೆಗೆ ಮುಂದಿನ ದಿನಗಳಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸೋಣವೆಂದು ಕರೆ ನೀಡಿದರು. ನಾವು ವಿದ್ಯಾರ್ಥಿಜೀವನದಲ್ಲಿ ಕ್ರೀಡೆ ಗೆ ವೇದಿಕೆನೇ ಸೃಷ್ಠಿಯಾಗುತ್ತಿರಲಿಲ್ಲ. ಈಗ ಕ್ರೀಡೆಗೆ ವೇದಿಕೆ ಸೃಷ್ಠಿಸಲಾಗುತ್ತಿದೆ ಎಂದರು.
ಒಟ್ಟು 42 ಗ್ರಾಮ ಪಂಚಾಯಿತಿಗಳಲ್ಲಿ 40 ಗ್ರಾಮ ಪಂಚಾಯಿತಿಗಳು ಕ್ರೀಡೋತ್ಸವದಲ್ಲಿ ಭಾಗಿಯಾಗಿದ್ದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post