ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
75 ನೇ ಸ್ವಾತಂತ್ರೋತ್ಸವ ಅಂಗವಾಗಿ ನಗರದಲ್ಲಿ ಭಾರತ ಸೇವಾದಳ ಸಹಕಾರದೊಂದಿಗೆ ವನ ಮಹೋತ್ಸವ, ಉಚಿತ ಆರೋಗ್ಯ ತಪಾಸಣೆ, ಶ್ರಮಾಧಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಅಂಗವಾಗಿ ಇಂದು ಚಾಲನೆ ನೀಡಲಾಗಿದೆ ಎಂದು ಸರ್ಜಿ ಪೌಂಡೇಷನ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸರ್ಜಿ Dr. Dhananjaya Sarji ಹೇಳಿದರು.
ಅವರು ಬುಧವಾರ ಬೆಳಗ್ಗೆ ಭಾರತ ಸೇವಾದಳ ಜಿಲ್ಲಾ ಶಾಖೆ, ಸರ್ಜಿ ಪೌಂಡೇಷನ್ ಮತ್ತು ಕೋಟೆ ಗೆಳೆಯರ ಬಳಗ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಕೋಟೆ ರಸ್ತೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ, ಸಸ್ಯೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ಟೈಪಾಯಿಡ್ ಉಚಿತ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಗುರಿ ಹೊಂದಲಾಗಿದೆ. ಆರೋಗ್ಯ ಅಭಿಯಾನಕ್ಕೆ ಶಿಕ್ಷಣ ಇಲಾಖೆ ಹಾಗೂ ಪೋಷಕರ ಸಹಕಾರ ಅಗತ್ಯ ಎಂದರು.

Also read: ಬರಿಗಾಲಿನಲ್ಲಿ ಸಂಚರಿಸಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ!
ಡಿಡಿಪಿಐ ಪರಮೇಶ್ವರಪ್ಪ ಮಾತನಾಡಿ, ಮಕ್ಕಳಲ್ಲಿ ರಿಸರ ಪ್ರಜ್ಞೆ ಮೂಡಿಸುವ ಹಾಗೂ ಆರೋಗ್ಯ ತಪಾಸಣೆ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ತಾಲೂಕು ಅಧ್ಯಕ್ಷ ರಮೇಶ್ ಬಾಬು, ಬಿಇಒ ಲೋಕೇಶ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ್, ಕೋಟೆ ಗೆಳೆಯರ ಬಳಗದ ಧನಂಜಯ, ಮಹಾನಗರ ಪಾಲಿಕೆ ಸದಸ್ಯರಾದ ಪ್ರಭು, ಗಾಯತ್ರಿ, ರಂಜಿತ್, ರಾಘವೇಂದ್ರ ನಾಯ್ಕ್, ಶರಶ್ಚಂದ್ರ, ಜಿಲ್ಲಾ ಸಂಘಟಕ ಎಚ್.ಸಿ ಪ್ರಸನ್ನಕುಮಾರ್ ಇತರರು ಇದ್ದರು.










Discussion about this post