ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಶಿವಮೊಗ್ಗ ಪೊಲೀಸರಿಂದ ಜಿಲ್ಲಾ ಕೇಂದ್ರ ಹಾಗೂ ಭದ್ರಾವತಿಯಲ್ಲಿ ಪಿಎಫ್’ಐ PFI ಹಾಗೂ ಎಸ್’ಡಿಪಿಐ SDPI ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಐವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಶಿವಮೊಗ್ಗ ತುಂಗಾ ನಗರ ವ್ಯಾಪ್ತಿಯಲ್ಲಿ ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಹಾಗೂ ಭದ್ರಾವತಿ ಹಳೇನಗರ ಠಾಣಾ ವ್ಯಾಪ್ತಿಯಲ್ಲಿ ಮೂರು ಕಡೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಹೇಳಲಾಗಿದೆ.
ಭದ್ರಾವತಿಯಲ್ಲಿ ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಇಂದು ನಸುಕಿನ 3 ಗಂಟೆ ವೇಳೆಯಲ್ಲಿ ದಾಳಿ ನಡೆಸಲಾಗಿದೆ.
ಇದೇ ವೇಳೆ ಶಿವಮೊಗ್ಗದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಭದ್ರಾವತಿಯಲ್ಲಿ 03 ಜನ ಮತ್ತು ಶಿವಮೊಗ್ಗದಲ್ಲಿ 02 ಜನರನ್ನು ಸೇರಿ ಒಟ್ಟು 05 ಜನರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಆಯಾ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರು ಪಡಿಸಿದ್ದು, ಸದರಿ ವ್ಯಕ್ತಿಗಳ Preventive Detentionಗೆ ತಾಲ್ಲೂಕು ದಂಡಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post