ಕಲ್ಪ ಮೀಡಿಯಾ ಹೌಸ್ | ಶ್ರೀರಂಗಪಟ್ಟಣ |
ಜಾಮಿಯಾ ಮಸೀದಿ Jamia Mosque ವಿಚಾರದಲ್ಲಿ ಇಂದು ನಡೆಸಲು ಉದ್ದೇಶಿಸಿದ್ದ ಹಿಂದೂ ಸಮಾಜದ ರ್ಯಾಲಿಯಲ್ಲಿ ಕೊನೆಯ ಕ್ಷಣದಲ್ಲಿ ರದ್ದು ಮಾಡಲಾಗಿದೆ.
ಈ ಕುರಿತಂತೆ ವಿಎಚ್’ಪಿ ಮುಖಂಡ ಸುನೀಲ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಈ ಪ್ರದೇಶದಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿದೆ. ಹೀಗಾಗಿ, ನಮ್ಮ ನೆಲದ ಕಾನೂನಿಗೆ ಗೌರವ ನೀಡಿ ಪ್ರತಿಭಟನಾ ರ್ಯಾಲಿಯನ್ನು ರದ್ದು ಮಾಡುತ್ತಿದ್ದೇವೆ ಎಂದಿದ್ದಾರೆ.
ಇದಕ್ಕೆ ಬದಲಾಗಿ, ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿ ಮಂಟಪದಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಣ ಹಾಗೂ ಜಪ ಮಾಡುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post