ಕಲ್ಪ ಮೀಡಿಯಾ ಹೌಸ್ | ಸೊರಬ |
ರಾಷ್ಟ್ರಧ್ವಜ, ರಾಷ್ಟ್ರಗೀತೆ, ಧ್ವಜವಂದನೆ, ಧ್ವಜ ಸಂಹಿತೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಆಯೋಜಿಸಿ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಹೇಳಿದರು.
ಜನಸಂಗ್ರಾಮ ಪರಿಷತ್ ಸೊರಬ, ಯುವಾ ಬ್ರಿಗೇಡ್ ಸೊರಬ, ನಮ್ಮೂರು ಸಮುದಾಯ ಅಭಿವೃದ್ಧಿ ಸಂಸ್ಥೆಯ ವತಿಯಿಂದ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವತಂತ್ರ ಬಂದು 75 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಂತಸದ ವಿಚಾರ. ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಎಲ್ಲಾ ಕಡೆ ಧ್ವಜಾರೋಹಣ ಮಾಡಬೇಕಾಗಿರುವುದರಿಂದ ಜನರಲ್ಲಿ ಸಾಕಷ್ಟು ತಿಳುವಳಿಕೆ ಇರುವುದಿಲ್ಲ. ಧ್ವಜ ಕಟ್ಟಲು ಹಿಂಜರಿಕೆ ಮಾಡುತ್ತಾರೆ. ಹೀಗಾಗಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರಧ್ವಜ, ರಾಷ್ಟ್ರಗೀತೆಯ ಇತಿಹಾಸ, ಧ್ವಜ ಸಂಹಿತೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಬೇಕು ಎಂದು ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
Also read: Vidyashilpa Academy students win the ‘Verbattle Debate Championship
ಈ ಸಂದರ್ಭದಲ್ಲಿ ಯುವಾ ಬ್ರಿಗೇಡ್ ನ ಸಂಚಾಲಕ ಮಹೇಶ್ ಕಾರ್ವಿ, ನಮ್ಮೂರು ಸಂಸ್ಥೆಯ ರಾಘವೇಂದ್ರ, ಅಕ್ಕನ ಬಳಗದ ಅಧ್ಯಕ್ಷೆ ರೇಣುಕಮ್ಮ ಗೌಳಿ, ಸ್ನೇಹ ಸುರಭಿ ಮಹಿಳಾ ಸಂಘದ ಸರಸ್ವತಿ ನಾವುಡ, ಪ್ರಾಂಶುಪಾಲ ಮಂಜು, ರಾಜೇಂದ್ರ, ವಿನೋದ್ ವಾಲ್ಮೀಕಿ, ಮಂಜು, ರಂಗನಾಥ ಮೊಗವೀರ, ಗಂಧರ್ವ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post