ಕಲ್ಪ ಮೀಡಿಯಾ ಹೌಸ್ | ತುಮಕೂರು |
5 ಮಂದಿ ಅಂತರ್ ರಾಜ್ಯ ಡಕಾಯಿತರನ್ನು ನಗರ ಉಪ ವಿಭಾಗದ ಪೊಲೀಸರು ಬಂಧಿಸಿ 23 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಿಗಂಬರ್ ಕಿರಣ್ ಕುಂಡಲಿಕ್ ಸುಳೆ, ಸಿದ್ದನಾಥ ರಾಮಚಂದ್ರ ಪಡಾಲ್ಕರ್, ಹರ್ಷವರ್ಧನ್ ಬಾಳಿ ರಾಮ್ ಮಾನೆ, ವಿವೇಕ್ ದೌಲತ್ ರಾವ್ ಮೆಟ್ಕರಿ ಮತ್ತು ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರಾಗಿದ್ದು, ಆರೋಪಿಗಳಿಂದ ಒಟ್ಟು 53,53,150ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ, ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ ಹಾಗೂ ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಅಡಿಷನಲ್ ಎಸ್ಪಿ ಉದೇಶ ಅವರ ಮಾರ್ಗದರ್ಶನಲ್ಲಿ ಐವರು ಅಂತರ್ ರಾಜ್ಯ ಡಕಾಯಿತರನ್ನು ಬಂಧಿಸಲು ಹಗಲು ರಾತ್ರಿ ಶ್ರಮಿಸಿದ ಅಡಿಶನಲ್ ಎಸ್ಪಿ ಉದೇಶ್, ತುಮಕೂರು ಉಪ ವಿಭಾಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ, ಅವರ ಕಾರ್ಯವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಬಹುಮಾನ ಕೊಡಿಸುವುದಾಗಿ ತಿಳಿಸಿದರು.
Also read: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post