ಕಲ್ಪ ಮೀಡಿಯಾ ಹೌಸ್ | ಉಡುಪಿ |
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ K S Eshwarappa ಬಿಗ್ ರಿಲೀಫ್ ದೊರೆತಿದ್ದು, ಈ ಪ್ರಕರಣದಲ್ಲಿ ಪೊಲೀಸ್ ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಪ್ರಕರಣ ಕುರಿತಂತೆ ಉಡುಪಿ ಎಸ್‌ಪಿ ಹರ್ಷವರ್ಧನ್ Udupi SP Harshavardhan ಅವರು ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದು, ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್‌ಚೀಟ್ ನೀಡಲಾಗಿದೆ.
ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪನವರ ಪ್ರಚೋದನೆ ಕಾರಣ ಅಥವಾ ಕೊಲೆ ಎಂಬುದಕ್ಕೆ ಯಾವುದೇ ರೀತಿಯ ಸಾಕ್ಷಿ ಇಲ್ಲ. ಹೀಗಾಗಿ ಈಶ್ವರಪ್ಪನವರಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಕೆ.ಎಸ್. ಈಶ್ವರಪ್ಪ ಚೌಡೇಶ್ವರಿ ಆಶೀರ್ವಾದದಿಂದ ಆರೋಪ ಮುಕ್ತನಾಗಿ ಹೊರಬಂದಿದ್ದೇನೆ. ಆರೋಪ ಬಂದ ನಂತರವೂ ನಾನು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದ್ದೆ. ಇಂದು ಆರೋಪ ಮುಕ್ತನಾಗಿ ಹೊರಬಂದಿದ್ದೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post