ಕಲ್ಪ ಮೀಡಿಯಾ ಹೌಸ್ | ವಾರಣಾಸಿ |
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ವಾರಣಾಸಿಯ ಜ್ಞಾನವಾಪಿ ಮಸೀದಿ Gnanavapi mosque ವಿವಾದಕ್ಕೆ ಸಂಬಂಧಿಸಿದ ತೀರ್ಪು ಇಂದು ಮಧ್ಯಾಹ್ನ ಹೊರಬೀಳಲಿದೆ.
ಅಲ್ಲಿನ ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಅವರು, ಇಂದು ಮಧ್ಯಾಹ್ನ ತೀರ್ಪು ಪ್ರಕಟಿಸಲಿದ್ದು, ಎಲ್ಲರ ಚಿತ್ತ ವಾರಣಾಸಿಯತ್ತ ನೆಟ್ಟಿದೆ. ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಮಸೀದಿಲ್ಲ ಬದಲಾಗಿ ಈಶ್ವರನ ದೇವಾಲಯ ಎಂಬ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ನಡುವೆಯೇ ಐವರು ಮಹಿಳೆಯರು ಮಸೀದಿ ಗೋಡೆ ಮೇಲಿನ ಹಿಂದೂ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಐವರು ಮಹಿಳೆಯರು ಕೋರ್ಟ್ ಮೆಟ್ಟೆಲೇರಿದ್ದರು.

ಈ ನಡುವೆಯೇ ಮಸೀದಿ ಒಳಭಾಗದಲ್ಲಿ ವೀಡಿಯೋ ಸರ್ವೆ ನಡೆಸಿದ್ದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ಈ ಅರ್ಜಿಯ ವಿಚಾರಣೆ ಅಲ್ಲಿ ನಡೆಯುತ್ತದೆ.

ಇಂದು ಮಧ್ಯಾಹ್ನ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ವಾರಣಾಸಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಮುಖವಾಗಿ ಅಲ್ಲಿನ ನ್ಯಾಯಾಲಯದ ಸುತ್ತಮುತ್ತಲೂ ಹಾಗೂ ಜ್ಞಾನವಾಪಿ ಮಸೀದಿ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.









Discussion about this post