ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗಾಗಿ ರಾಜ್ಯದ ಬಹುನಿರೀಕ್ಷಿತ ಕಾಶಿ ಯಾತ್ರೆ ಪ್ರವಾಸ ಯೋಜನೆಗೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
Also Read: ಬಾಲಕಿಗೆ ಲೈಂಗಿಕ ಕಿರುಕುಳ: ಶಿವಮೊಗ್ಗದ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
2022-23ನೆಯ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪವಾದ ಕಾಶಿ ಯಾತ್ರೆ ಪ್ರವಾಸ ಯೋಜನೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಇದು ದೇವಾಲಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ ಎಂದವರು ತಿಳಿಸಿದ್ದಾರೆ.

ಕಾಶಿಯಾತ್ರೆ ಯೋಜನೆಯನ್ವಯ ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಬಹುದಾಗಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ ಈ ಯೋಜನೆಯನ್ವಯ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

Also Read: ಸಚಿವರಾಗುತ್ತಾರಾ ಅಭಿವೃದ್ಧಿಯ ಹರಿಕಾರ, ಕ್ರಿಯಾಶೀಲ ಶಾಸಕ ಹಾಲಪ್ಪ
ಈ ಕುರಿತಂತೆ ಮಾತನಾಡಿದ ಸಚಿವರು, ಜೀವಮಾನದಲ್ಲಿ ಒಂದು ಬಾರಿಯಾದರೂ ಕಾಶಿ ಯಾತ್ರೆ ಮಾಡಬೇಕೆನ್ನುವುದು ಬಹುತೇಕ ಹಿಂದೂಗಳ ಕನಸು. ಅನೇಕರಿಗೆ ನಾನಾ ಕಾರಣಗಳಿಂದ ಕಾಶಿಗೆ ಹೋಗಿಬರಲು ಸಾಧ್ಯವಾಗುತ್ತಿರಲಿಲ್ಲ. ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಆಸಕ್ತ ಯಾತ್ರಾರ್ಥಿಗಳನ್ನು ಕಾಶಿಗೆ ಹೋಗಿಬರಲು ಈ ಮೂಲಕ ಅನುಕೂಲ ಕಲ್ಪಿಸಲಾಗಿದೆ. ರಾಜ್ಯದ ಯಾತ್ರಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾದ ದಿವ್ಯಕಾಶಿ-ಭವ್ಯಕಾಶಿ’ಗೆ ಭೇಟಿ ನೀಡಿ ಕೃತಾರ್ಥರಾಗುವ ಅವಕಾಶ ಸಿಗಲಿದೆ ಎಂದಿದ್ದಾರೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post